ಮಹೇಶ್ ವಿಕ್ರಂ ಹೆಗ್ಡೆ ಅರೆಸ್ಟ್
ಮಹೇಶ್ ವಿಕ್ರಂ ಹೆಗ್ಡೆ ಎಂಬುವರು Face book ಖಾತೆಯಲ್ಲಿ POST CARD ಹೆಸರಿನಲ್ಲಿ -“ಮಾನ್ಯ ಮುಖ್ಯ ಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ” ಎಂಬ ಬರಹವನ್ನು ಪೋಸ್ಟ್ ಮಾಡಿದ್ದು, ಈ ವಿಷಯ ಸಂಬಂಧ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ: 143/2025 ಕಲಂ: 353(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡು ಮೂಡಬಿದರೆ ಪೊಲೀಸರು ಬೆಂಗಳೂರಿನಲ್ಲಿ ಇವರನ್ನು ವಶಕ್ಕೆ ಪಡೆದು ಇಂದು ಮೂಡಬಿದರೆಯ ಮಾನ್ಯ ಸಿ.ಜೆ ಮತ್ತು ಕೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಮಹೇಶ್ ವಿಕ್ರಂ ಹೆಗ್ಡೆ ಗೆ ನ್ಯಾಯಾಂಗ ಬಂಧನ ವಿಧಿಸಿದೆ.