ಹಾಸನ: ಗಣೇಶ ಮೆರವಣಿಗೆ ವೇಳೆ ಭೀಕರ ದುರಂತ, 8 ಮಂದಿ ಸಾವು
ಹಾಸನ: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಭೀಕರ ದುರಂತ ಸಂಭವಿಸಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದು 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಮದಲ್ಲಿ ಜನರ ಆಕ್ರಂದನ ಮುಗಿಲು ಮುಟ್ಟಿದೆ.
ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ಗುದ್ದಿ ಯಮನಂತೆ ಬಂದ ಟ್ರಕ್, ನೇರವಾಗಿ ಸಾವಿರಾರು ಜನರಿದ್ದ ಮೆರವಣಿಗೆಗೆ ನುಗ್ಗಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಗಾಯಾಳುಗಳನ್ನು ವಿವಿಧ ರವಾನಿಸಲಾಗಿದೆ.