ರಾಜ್ಯ

ಹಾಸನ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಸಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

Oplus_131072

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!