ಉಪ್ಪಿನಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಪುತ್ತೂರು: ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರ ಆರೋಪಿಯಾದ ಬೆಂಗಳೂರು ಶಿವಾಜಿನಗರದ ಇಮ್ರಾನ್ ಖಾನ್ (36 ವ) ಎಂಬಾತನು ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಆರೋಪಿಯನ್ನು ಬೆಂಗಳೂರು ನಗರದ ಕೆ.ಜಿ ಹಳ್ಳಿ ಎಂಬಲ್ಲಿಂದ ಸೆ.13ರಂದು ದಸ್ತಗಿರಿ ಮಾಡಿ ಸೆ.14ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.