ವಿಟ್ಲ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ
ವಿಟ್ಲ: ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮೋಟಾರ್ ಸೈಕಲಿನಲ್ಲಿ ಅಕ್ರಮವಾಗಿ ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೆ.15ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ರವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬಂದ ಖಚಿತ ಮಾಹಿತಿಯಂತೆ, ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ, ದ್ವಿಚಕ್ರ ವಾಹನದೊಂದಿಗೆ ಅನುಮಾಸ್ಪದವಾಗಿ ಮತ್ತು ಸಂಶಯಾಸ್ಪದವಾಗಿ ನಿಂತುಕೊಂಡಿದ್ದ ಮೂವರನ್ನು ವಿಚಾರಿಸಿದಾಗ ಅವರು ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮೋಟಾರ್ ಸೈಕಲಿನಲ್ಲಿ ಅಕ್ರಮವಾಗಿ ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದು, ಅವರನ್ನು ವಶಕ್ಕೆ ಪಡೆದು, ಅವರ ಬಳಿಯಿದ್ದ
6.27 ಗ್ರಾಂ ತೂಕದ ಗಾಂಜಾ, 3ಮೊಬೈಲ್, 1 ಸಣ್ಣ ಚೂರಿ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ದ ವಿಟ್ಲ ಠಾಣೆಯಲ್ಲಿ ಅಕ್ರ 126/2025 ಕಲಂ: 8(b), 20(b)(ii)(A) NDPS Act ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಸನತ್ ಕುಮಾರ್, (23)
ವಿಟ್ಲ ಕಸಬಾ ಗ್ರಾಮದ ನಿವಾಸಿ ಮಹಮ್ಮದ್ ರಾಝಿಕ್ (23)
ಹಾಗೂ ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಚೇತನ್ (23) ಎಂದು ತಿಳಿದು ಬಂದಿದೆ.
ಇನ್ನೊಬ್ಬ ಆರೋಪಿಯಾದ ಎರ್ಮೆಮಜಲು ನಿವಾಸಿ ಧ್ಯಾನ್ ಕರ್ಕೆರ (23ವ) ಎಂಬಾತನನ್ನು ನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.





