ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ಕಿರುಕುಳ: ಆರೋಪಿಗೆ ಶಿಕ್ಷೆ
ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಸಮಯ ಯುವತಿ ಕುಳಿತಿದ್ದ ಸೀಟಿನ ಪಕ್ಕಕ್ಕೆ ಕುಳಿತಿದ್ದ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2022 ಎಪ್ರಿಲ್ ತಿಂಗಳಲ್ಲಿ ಮಾಡ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸತ್ತಾರ್ ಎಂಬಾತ ಬಸ್ಸು ಸಂಚರಿಸುತ್ತಿದ್ದ ಸಮಯ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ರಾಜೇಶ್ ಕೆ ವಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸದ್ರಿ ಪ್ರಕರಣದಲ್ಲಿ ಪ್ರಧಾನ ಹಿರಿಯ ಸಿವಿಲ್ ಮತ್ತು ಎ ಸಿ ಜೆ ಎಂ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಪ್ರಕೃತಿ ಕಲ್ಯಾಣಪುರ್ ರವರು ಆರೋಪಿಯ ಮೇಲೆ ಆರೋಪ ಸಾಬೀತಾಗಿದೆ ಎಂದು ನಾಲ್ಕು ತಿಂಗಳುಗಳ ಜೈಲು ಮತ್ತು 10,000 ರೂ ದಂಡ ಹಾಗೂ ದಂಡ ನೀಡಲು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಿರುದ್ದಾರೆ. ಸರ್ಕಾರದ ಪರ ಸಹಾಯಕ ಸರಕಾರಿ ಅಭಿಯೋಜಕರಾಗಿ ಶ್ರೀಮತಿ ಕವಿತಾ ಕೆ ವಾದಿಸಿದ್ದರು.





