ಪುರುಷರಕಟ್ಟೆ: ಮೊಬೈಲ್ ಟವರ್ ಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ, ಆರೋಪಿಯ ಬಂಧನ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಮೊಬೈಲ್ ಟವರ್ ಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೆ.7ರಿಂದ ಸೆ.13ರ ಮದ್ಯದ ಅವಧಿಯಲ್ಲಿ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.13ರಂದು ಪ್ರಕರಣ ದಾಖಲಾಗಿತ್ತು. ಆರೋಪಿ ಕೇರಳದ ಕೊಲ್ಲಂ ನಿವಾಸಿ ಇಟ್ಟಿ ಫನಿಕ್ಕರ್ (60ವ) ಎಂಬಾತನನ್ನು ಪೊಲೀಸರು ಬಂಧಿಸಿದ್ದು ಕಳವುಗೈದ ಬ್ಯಾಟರಿಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.