ಕರಾವಳಿಕ್ರೈಂ

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಲವಾರು, ಬಂದೂಕು ಪತ್ತೆ: ಪ್ರಕರಣ ದಾಖಲು



ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಅಧಿಕಾರಿಗಳು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಆ.26ರಂದು ಶೋಧ ನಡೆಸಿದಾಗ ಅನೇಕ ವಸ್ತುಗಳನ್ನು ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿತ್ತು.


ಈ ವೇಳೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿರುವ ಬಗ್ಗೆ ಎಸ್‌ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮುಂದಿನ ತನಿಖೆ ನಡೆಸಲು ಎಸ್‌ ಐಟಿ ಎಸ್ಪಿ ಸಿ.ಎ.ಸೈಮನ್ ಸೆ.16ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ARMS ACT 1959(U/S-25(1), 25(1A), 24(1B)(2) ಮಹೇಶ್ ಶೆಟ್ಟಿ ವಿರುದ್ದ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!