ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಆರೋಪಿಗೆ ಶಿಕ್ಷೆ
ಬೆಳ್ತಂಗಡಿ: ಮಹಿಳೆಯೋಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಸುಬ್ಬಾಪುರ್ ಮಠ್ ದೋಷರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿ ನ್ಯಾಯಾಲಯದ ನ್ಯಾಯಾಧೀಶರಾದ ಸಂದೇಶ್ ರವರು ಆರೋಪಿ ಉಮೇಶ್ ಗೌಡ ಮೇಲೆ ಆರೋಪ ಸಾಬೀತಾಗಿದೆ ಎಂದು ಮೂರು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5000 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ ಆರು ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸಹಾಯಕ ಸಹಕಾರಿ ಅಭಿಯೋಜಕರಾಗಿ ಶ್ರೀಮತಿ ಆಶಿತಾರವರು ವಾದಿಸಿದ್ದರು.





