ಕರಾವಳಿಕ್ರೈಂ

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಂಧನ

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ಸೆ.22ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕಿನ ನಾರಾಯಣ (42ವ) ಎಂಬಾತ ಲೈಂಗಿಕ ಕಿರುಕುಳ ನೀಡಿರುವ ಕುರಿತು ನೀಡಿರುವ ದೂರಿಗೆ ಸಂಬಂದಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದಿನಾಂಕ 22-09-2025 ರಂದು ಅಕ್ರ 133/2025 ಕಲಂ: 7, 8 POCSO Act 2012 ಮತ್ತು 329(4), 75 BNS-2023 ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯವು  ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!