ಸಂಪ್ಯ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಗಂಭೀರ
ಪುತ್ತೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೆ.24ರಂದು ಬೆಳಗ್ಗೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯದಲ್ಲಿ ನಡೆದಿದೆ.

ಸಂಪ್ಯ ಮಸೀದಿ ಸಮೀಪ ಅಬ್ದುಲ್ ರಹಿಮಾನ್ (ಪುತ್ತು) ಎಂಬವರು ರಸ್ತೆ ದಾಟುತ್ತಿದ್ದ ವೇಳೆ ಬಂದ ಬ್ರೇಝಾ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಪುತ್ತು ಅವರಿಗೆ ಸಂಪ್ಯದ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.