ನರಿಮೊಗರು: ಓಮ್ನಿ ಕಾರು ಡಿಕ್ಕಿ, ಬಾಲಕಿಗೆ ಗಂಭೀರ ಗಾಯ
ಪುತ್ತೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೆ.24ರಂದು ಸಂಜೆ ನರಿಮೊಗರಿನಲ್ಲಿ ನಡೆದಿದೆ.
ಗಾಯಗೊಂಡ ಬಾಲಕಿಯನ್ನು ವರ್ಷಾ ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ನರಿಮೊಗರು ತಲುಪಿದ ವೇಳೆ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ವರ್ಷಾ ಅವರಿಗೆ ಡಿಕ್ಕಿ ಹೊಡೆದಿದೆ. ಕೂಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.