ವಿಟ್ಲ: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ವಿಟ್ಲ ಪೊಲೀಸ್ ಠಾಣಾ ಪ್ರಕರಣವೊಂದರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಮಹಮ್ಮದ್ ಇಷ್ರಾದ್ ಕೆ.ಎ(32.ರ್ಷ) ಎಂಬಾತನು ತಲೆ ಮರೆಸಿಕೊಂಡಿದ್ದು ನ್ಯಾಯಲಯವು ವಾರಂಟ್ ಹೊರಡಿಸಿತ್ತು. ಆರೋಪಿಯನ್ನು ಸೆ.26ರಂದು ಬಂಟ್ವಾಳ ತಾಲೂಕಿನ ಅಳಿಕೆ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಈತನ ಮೇಲೆ ಪುತ್ತೂರು ನಗರ ಠಾಣೆಯಲ್ಲಿ, ಬಂಟ್ವಾಳ ನಗರ ಠಾಣೆಯಲ್ಲಿ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.