ನಟ ವಿಜಯ್ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ, 30ಕ್ಕೂ ಅಧಿಕ ಮಂದಿ ಸಾವು
ಚೆನ್ನೈ: ನಟ-ರಾಜಕಾರಣಿ ವಿಜಯ್ ದಳಪತಿ ತಮಿಳುನಾಡಿನ ಕರೂರಿನಲ್ಲಿ ಇಂದು ನಡೆದ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿತಕ್ಕೆ 33 ಮಂದಿ ಬಲಿಯಾಗಿದ್ದಾರೆ.

ಮೃತ ವಯಸ್ಕರು, ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಿಗರಾಗಿದ್ದರು. ರ‍್ಯಾಲಿಗಾಗಿ ಕನಿಷ್ಠ ಆರು ಗಂಟೆಗಳ ಕಾಲ ಕಾದಿದ್ದರು. ಸ್ಥಳಕ್ಕೆ ರ‍್ಯಾಲಿ ತಡವಾಗಿ ಬಂದಿತು. ಹೀಗಾಗಿ, ಹೆಚ್ಚಿನ ಜನಸಂದಣಿಯಾಗಿ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ.
ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಕರೂರಿಗೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ಜಿಲ್ಲಾ ಕಾರ್ಯದರ್ಶಿ ವಿ. ಸೆಂಥಿಲ್‌ಬಾಲಾಜಿ ಅವರಿಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.