ಕುಂಬ್ರ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತ್ಯು
ಪುತ್ತೂರು: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.3ರಂದು ಕುಂಬ್ರ ಸಾರೆಪುಣಿಯಲ್ಲಿ ನಡೆದಿದೆ.

ಸೆ.25 ರಂದು ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಕುಂಬ್ರ ಸಮೀಪದ ಸಾರೆಪುಣಿ ನಿವಾಸಿ ಯೋಗೀಶ್ (33.ವ) ಎಂಬವರು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಾಯಿ ಶಶಿಕಲಾ, ಪತ್ನಿ ಸುಮಿತ್ರ ಹಾಗೂ ಇಬ್ಬರು ಪುತ್ರಿಯರನ್ನು ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. ಇವರು ಸೋಶಿಯಲ್ ಮೀಡಿಯಾದಲ್ಲಿ ತುಳು ರಿಲ್ಸ್ ಮೂಲಕ ಚಿರಪರಿಚಿತರಾಗಿದ್ದರು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.