ಉಡುಪಿ: ಸೈಫುದ್ದೀನ್ ಹತ್ಯೆ ಪ್ರಕರಣ, ನಾಲ್ಕನೇ ಆರೋಪಿ ಬಂಧನ
ಉಡುಪಿ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ನಾಲ್ಕನೇ ಆರೋಪಿಯನ್ನು ಪ್ರಕರಣದ ಮೊದಲ ಆರೋಪಿ ಫೈಜಲ್ ಖಾನ್ ಅವರ ಪತ್ನಿ ರಿಧಾ ಶಬಾನಾ (27) ಎಂದು ಗುರುತಿಸಲಾಗಿದೆ. ಅವರು ಹತ್ಯೆಯ ಯೋಜನೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ.
ಇದಕ್ಕೂ ಮೊದಲು, ಪ್ರಕರಣದಲ್ಲಿ ಭಾಗಿಯಾದ ಮೂವರನ್ನು ಬಂಧಿಸಲಾಗಿತ್ತು