ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ: ಸಿದ್ದರಾಮಯ್ಯ
ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮೀಕ್ಷೆ ಮಂಗಳವಾರ ಪೂರ್ಣಗೊಳ್ಳುವ ವಿಶ್ವಾಸವಿದೆ. ಮುಗಿಯದಿದ್ದರೆ ದಿನಾಂಕ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು. ನಾಳೆ ಸಂಜೆ ತನಕ ಕಾದು ನೋಡುತ್ತೇವೆ. ಕೊಪ್ಪಳ ಜಿಲ್ಲೆಯಲ್ಲಿ ಶೇ 97 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಉಳಿದೆಡೆಯೂ ಚುರುಕಾಗಿದೆ ಎಂದರು.