ಕರಾವಳಿ

ಪುತ್ರ ಆಸ್ಪತ್ರೆಯಲ್ಲಿ …ಶಾಸಕರು ಆಪೀಸ್‌ನಲ್ಲಿ…ನೋವಿನ ನಡುವೆ ಅಹವಾಲು ಸ್ವೀಕರಿಸಿದ ಅಶೋಕ್ ರೈ


ಪುತ್ತೂರು: ಹೌದು… ಸೋಮವಾರ ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ ಇವರು ತಮ್ಮ ಬಳಿ ಬಂದ ಪ್ರತೀಯೊಬ್ಬರಲ್ಲೂ ಮತನಾಡಿಸಿದರು. ಬೆಳಿಗ್ಗೆಯಿಂದ ರಾತ್ರಿ ತನಕ ಕಚೇರಿಯಲ್ಲೇ ಇದ್ದರು.


ಆದರೆ ಶಾಸಕ ಅಶೋಕ್ ರೈ ಅವರು ಭಾರವಾದ ನೋವನ್ನು ತನ್ನ ಮನಸ್ಸಿನಲ್ಲಿ ಅದುಮಿಟ್ಟು ಇಷ್ಟೆಲ್ಲಾ ಕೆಲಸವನ್ನು ಮಾಡುತ್ತಿದ್ದರು ಎಂದು ಅಲ್ಲಿ ಸೇರಿದ್ದ ಯರಿಗೂ ಗೊತ್ತಾಗಲಿಲ್ಲ, ಸಂಕಷ್ಟದ ನಡುವೆ ಜನರ ಸಮಸ್ಯೆಗೆ ಸ್ಪಂದನೆಯನ್ನು ಮಾಡಿದ್ದಾರೆ ಎಂದು ಕಚೇರಿಗೆ ಬಂದ ಯಾವ ಸಾರ್ವಜನಿಕರಿಗೂ ಗೊತ್ತಾಗಲಿಲ್ಲ.



ಶಾಸಕರ ಪುತ್ರ ಭಾನುವಾರ ಬೆಂಗಳೂರಿನಲ್ಲಿ ನಡೆದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಜಿಲ್ಲೆಯಿಂದ ಮೂವರು ಬಾಸ್ಕೆಟ್ ಬಾಲ್ ಪಟುಗಳು ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಶಾಸಕ ಪುತ್ರನ ಕಾಲು ಟ್ವಿಸ್ಟ್ ಆಗಿ ಎಲುಬು ತುಂಡರಿಸಿತ್ತು. ಪುತ್ರನನ್ನು ಮಂಗಳೂರಿಗೆ ಕರೆದುಕೊಂಡು ಬಂದು ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ದಾಖಲಿಸಿತ್ತು. ಸೋಮವಾರ ಬೆಳಿಗ್ಗೆ 10.30ಕ್ಕೆ ಮಗನ ಕಾಲು ಸರ್ಜರಿಯಾಗಿದೆ. ಪತ್ನಿ ಸುಮಾ ಅಶೋಕ್ ರೈ ಆಸ್ಪತ್ರೆಯಲ್ಲಿದ್ದರು…ತನ್ನ ಮಗನಿಗೆ ಚಿಕಿತ್ಸೆ ಕೊಡಿಸುವ ಉದ್ದೇಶದಿಂದ ಶಾಸಕರು ಆಸ್ಪತ್ರೆಗೆ  ಹೋಬೇಕಿತ್ತು ಆದರೆ ಅವರು ಭಾನುವಾರ ಇಡೀದಿನ ಪುತ್ತೂರಿನಲ್ಲಿ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು, ಸೋಮವಾರವೂ ಕಚೇರಿಯಲ್ಲಿದ್ದರು…

ಈ ಬಗ್ಗೆ ಶಾಸಕ ಅಶೋಕ್ ರೈ ಅವರಲ್ಲಿ ಕೇಳಿದಾಗ ‘ ನನ್ನ ಮಗನಿಗೆ ಅವಘಡ ಸಂಭವಿಸಿದೆ, ಕಾಲಿನ ಎಲುಬು ಫ್ಯಾಕ್ಚರ್ ಆದ ಕಾರಣ ಆಸ್ಪತ್ರೆಯಲ್ಲಿ ದಾಖಲಿಸಿ ಸರ್ಜರಿ ಮಾಡಲಾಗಿದೆ, ನಾನು ಹೋಗಬೇಕಿತ್ತು. ಇವತ್ತು ಸೋಮವಾರ, ಪ್ರತೀ ಸೋಮವಾರ ನಾನು ಕಚೇರಿಯಲ್ಲಿರುತ್ತೇನೆ ಎಂದು ಜನರಿಗೆ ವಾಗ್ದಾನ ಹೇಳುತ್ತಿದ್ದೇನೆ. ನನ್ನ ಬಳಿ ಸಂಕಷ್ಟ ಹೇಳಲು ಒಂದಷ್ಟು ಮಂದಿ ಬಡವರು, ನೊಂದವರು ಬರುತ್ತಾರೆ. ಏಕಾಏಕಿ ನಾನು ಕಚೇರಿಗೆ ಬಾರದೆ ರಜೆ ಹಾಕಿದ್ದಲ್ಲಿ ನನ್ನನ್ನು ಭೇಟಿಯಾಗಲು ಬರುವ ಸಾರ್ವಜನಿಕರಿಗೆ ಬೇಸರವಾಗಬಹುದು, ಅವರ ಮನಸ್ಸು ನೋಯಿಸುವುದು ನನಗೆ ಇಷ್ಟವಾಗಲಿಲ್ಲ, ಈ ಕಾರಣಕ್ಕೆ ನಾನು ಕಚೇರಿಗೆ ಬಂದಿದ್ದೆ ಎಂದು ಹೇಳಿದಾಗ , ನಿಮ್ಮ ಮಗನಿಗೆ ಅಲ್ವ ಕಾಲು ಫ್ಯಾಕ್ಚರ್ ಆಗಿದ್ದು ನೀವು ಆಸ್ಪತ್ರೆಗೆ ಬೆಳಿಗ್ಗೆಯೇ ಭೇಟಿ ಕೊಡಬೇಕಿತ್ತಲ್ವ ಎಂದು ಕೇಳಿದಾಗ .. ಶಾಸಕರು ಮೌನವಾದರು.. ಕಣ್ಣುಗಳು ತೇವಗೊಂಡವು….

Leave a Reply

Your email address will not be published. Required fields are marked *

error: Content is protected !!