ನದಿಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ!

ನದಿಗೆ ಬಟ್ಟೆ ಒಗೆಯಲು ಹೋಗಿದ್ದ ಮಹಿಳೆಯೊಬ್ಬರನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ. ಮೃತಳನ್ನು 55 ವರ್ಷದ ಸೌದಾಮಿನಿ ಮಹಾಲಾ ಎಂದು ಗುರುತಿಸಲಾಗಿದೆ.
ನದಿ ದಂಡೆಯಲ್ಲಿ ಅಡಗಿಕೊಂಡಿದ್ದ ಮೊಸಳೆ ಇದ್ದಕ್ಕಿದ್ದಂತೆ ಆಕೆಯ ಮೇಲೆ ಹಾರಿ ನೀರಿನೊಳಕ್ಕೆ ಎಳೆದೊಯ್ದಿದೆ. ಆಕೆಯ ಕಿರುಚಾಟ ಕೇಳಿ ಸ್ಥಳಕ್ಕೆ ಗ್ರಾಮಸ್ಥರು ಧಾವಿಸಿದ್ದರು. ಅಷ್ಟರಲ್ಲಾಗಲೇ ಮೊಸಳೆ ಆಕೆಯನ್ನು ನದಿಯೊಳಗೆ ಎಳೆದೊಯ್ದಿತ್ತು ಎನ್ನಲಾಗಿದೆ. ಇದನ್ನು ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಒಡಿಶಾದ ಜಾಜ್ಪುರ ಜಿಲ್ಲೆಯಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಮಹಿಳೆಯ ಮೃತದೇಹ ಪತ್ತೆಯಾಗಲಿಲ್ಲ.