ಕುಂಬ್ರ ವರ್ತಕರ ಸಂಘದ ಸ್ಥಾಪನಾ ದಿನದ ಪ್ರಯುಕ್ತ ಕೆದಂಬಾಡಿ ಗ್ರಾಮ ಪಂಚಾಯತ್ ಗೆ ಸೋಫಾ ಕೊಡುಗೆ
ಪುತ್ತೂರು: ವರ್ತಕರ ಸಂಘ ರಿ ಕುಂಬ್ರ ಇದರ 21ನೇ ಸ್ಥಾಪನಾ ದಿನದ ಪ್ರಯುಕ್ತ ಕೆದಂಬಾಡಿ ಗ್ರಾಮ ಪಂಚಾಯತ್ ಗೆ ಸಾರ್ವಜನಿಕ ಉಪಯೋಗಕ್ಕಾಗಿ ಸೋಫಾ ನೀಡಲಾಯಿತು. ಅದೇ ರೀತಿ ಕೆದಂಬಾಡಿ ಗ್ರಾಮ ಪಂಚಾಯತ್ ಗೆ ನೂತನ ವಾಗಿ ಆಗಮಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಾವಣ್ಯ ಅವರನ್ನು ಯವರನ್ನು ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ವರ್ತಕ ಸಂಘದ ಅಧ್ಯಕ್ಷ ಪಿ.ಕೆ ಮಹಮ್ಮದ್ ಕೂಡುರಸ್ತೆ, ಸ್ಥಾಪಕಾಧ್ಯಕ್ಷ ಶ್ಯಾಮ್ ಸುಂದರ ರೈ ಕೊಪ್ಪಳ, ದಿವಾಕರ ಶೆಟ್ಟಿ, ನಾರಾಯಣ ಪೂಜಾರಿ ಕುರಿಕ್ಕಾರ, ಮೆಲ್ವಿನ್ ಮಾಂತೆರೋ, ಸದಾಶಿವ, ಭವ್ಯ ರೈ ಹಾಗೂ ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ, ಅಭಿವೃದ್ಧಿ ಅಧಿಕಾರಿ ಲಾವಣ್ಯ, ಕಾರ್ಯದರ್ಶಿ ಸುರೇಂದ್ರ ರೈ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.



