ಕರಾವಳಿಕ್ರೈಂಜಿಲ್ಲೆ

ಭರತ್ ಕುಮ್ಡೇಲ್‌ ಗೆ ನ್ಯಾಯಾಂಗ ಬಂಧನ


ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಅ.ಕ್ರ: 169/2017 500: 143, 147, 148, 447, 448, 302. 120(ಬಿ), 201 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ ಅ.10ರಂದು ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರಾಗಿದ್ದು ನ್ಯಾಯಾಲಯವು ಆರೋಪಿಗೆ ದಿನಾಂಕ: 25.10.2025ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 54/2025 ಕಲಂ 103 109 118(1) 190 191(1) 118(2) 191(2) 191(3) ಬಿಎನ್‌ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ  ಎ 1 ಆರೋಪಿ ಭರತ್ ಕುಮ್ಡೆಲ್ ಪ್ರಕರಣ  ದಾಖಲಾದ ದಿನದಿಂದಲೇ ತಲೆಮೆರೆಸಿಕೊಂಡಿದ್ದು ಈತನ ಮೇಲೆ ಈಗಾಗಲೇ ಹಲವು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!