ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್ ನಿಧನ
ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್ (73ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಅ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಕಳೆದ 21 ವರ್ಷಗಳಿಂದ ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಯ್ಯೂರು ಶ್ರೀ ಮಹಿಷ ಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದ ಮಾಜಿ ಆಡಳಿತ ಮುಕ್ತೇಸರರೂ ಆಗಿದ್ದ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಯಶೋಧ, ಪುತ್ರಿ ಶ್ರೀನಿಧಿ, ಅಳಿಯ ನಾಗಾನಂದ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಆಗಮಿಸಿ ಸಂತಾಪ ಸೂಚಿಸಿದ್ದಾರೆ.



