ಯೂ ಟ್ಯೂಬ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪ: ಜಯಂತ್ ಟಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಿದ ಅಂಶಗಳು ಸರಿಯಾಗಿದೆ ಎಂದು ಗೊತ್ತಿದ್ದರು ಕೂಡಾ ಸುಳ್ಳು ಮಾಹಿತಿಗಳ ಮೂಲಕ ಬಂಟ್ವಾಳ ಡಿವೈಎಸ್ಪಿ ಮತ್ತು ಪುತ್ತೂರು ಎಸಿ ಬಗ್ಗೆ ಜಯಂತ್ ಟಿ ಎಂಬವರು ಯೂಟ್ಯೂಬ್ ನಲ್ಲಿ ತಪ್ಪು ಸಂದೇಶಗಳನ್ನು ವಿಡಿಯೋ ಮಾಡಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



