ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ 20ಕ್ಕೂ ಅಧಿಕ ಪ್ರಕರಣಗಳ ಆರೋಪಿಯ ಬಂಧನ
ಬಂಟ್ವಾಳ: 20ಕ್ಕೂ ಅಧಿಕ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಜಿಪಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ ವಾರಂಟ್ ಆರೋಪಿ. ಅ.15ರಂದು ಬಂಟ್ವಾಳ ತಾಲೂಕಿನ ಮದ್ವ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈತನ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ ನಂ:38/20 ಕಲಂ: 457,380 IPC ,
39/2020 ಕಲಂಃ 380,201, 34 IPC ,
48/2012 ಕಲಂಃ 379,201,34 IPC ,
119/2020 ಕಲಂಃ 457,380 IPC ,
ಕಡಬ ಪೊಲೀಸ್ ಠಾಣಾ ಅ.ಕ್ರ 43/2020,44/2020,45/2020,46/2020 ಕಲಂಃ 457,380 IPC ಮತ್ತು
ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೋಣಾಜೆ, ಬರ್ಕೆ, ಬಜಪೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.




