ಅಶೋಕ ಜನಮನ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಜಿಲ್ಲಾ ಎಸ್ಪಿ ಸಹಿತ ಪೊಲೀಸ್ ಅಧಿಕಾರಿಗಳ ಭೇಟಿ

ಪುತ್ತೂರು: ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮದ ಸಿದ್ದತೆಯನ್ನು ಪರಿಶೀಲಿಸುವ ನಿಟ್ಟಿನಲ್ಲಿ ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್ ಜಾನ್ಸನ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಿದ್ದತಾ ಪರಿಶೀಲನೆ ನಡೆಯಿತು



