ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ, ಹಲವರ ವಿರುದ್ದ ಪ್ರಕರಣ ದಾಖಲು
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದು, ಹೊಡೆದಾಡಿಕೊಂಡ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.12ರಂದುಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಹೆಚ್.ಸಿ ಕೃ಼ಷ್ಣ ನಾಯ್ಕ ಅವರು ಮಂಚಿ ಗ್ರಾಮದಲ್ಲಿ ಬೀಟ್ ಸಂಚರಿಸುತ್ತಿರುವಾಗ ಮಂಚಿ ಕಟ್ಟೆ ಎಂಬಲ್ಲಿ ಯುವಕರು ಗಲಾಟೆ ಮಾಡಿಕೊಳ್ಳುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸ್ಥಳಕ್ಕೆ ಹೋದಾಗ ಜನರು ಗುಂಪು ಸೇರಿದ್ದು ಗುಂಪಿನಲ್ಲಿ ವಿಜೇತ್, ರಕ್ಷಿತ್ ಕೊಟ್ಟಾರಿ, ಪುಷ್ಪರಾಜ್, ಅಜೇಯ್, ಜಮೀರ್, ಮಹಮ್ಮದ್ ಮುಸ್ತಫ್ ರವರು ಗಲಾಟೆ ಮಾಡಿಕೊಳ್ಳುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ದ್ವೇಷವನ್ನುಂಟು ಮಾಡುವ, ಸೌಹಾರ್ದತೆಗೆ ಬಾಧಕವಾಗುವ ರೀತಿಯಲ್ಲಿ ಪರಸ್ಪರವಾಗಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು, ಹೊಡೆದಾಡಿಕೊಂಡಿರುವ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



