ಅಶೋಕ ಜನಮನ’ ಯಶಸ್ಸಿಗೆ ದರ್ಗಾದಲ್ಲಿ ಪ್ರಾರ್ಥನೆ

ಪುತ್ತೂರು: ಅಕ್ಟೋಬರ್ 20ರಂದು ಪುತ್ತೂರಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆಯಲಿರುವ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ರವರು ಆಗಮಿಸುವ ಹಿನ್ನೆಲೆಯಲ್ಲಿ, ಕಾರ್ಯಕ್ರಮವು ಶಿಸ್ತಿನಿಂದ ಮತ್ತು ಯಶಸ್ವಿಯಾಗಿ ನೆರವೇರಲೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ಅವರ ನೇತೃತ್ವದಲ್ಲಿ ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಯ ಕರವಡ್ತ ವಲಿಯುಲ್ಲಾಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಮಸೀದಿಯ ಖತೀಬ್ ಅಬ್ಬಾಸ್ ಮದನಿ ಅವರು ಪ್ರಾರ್ಥನೆ ನೆರವೇರಿಸಿದರು.



