ಅಶೋಕ ಜನಮನ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡ ಯಾರಿಗೂ ತೀವ್ರ ತರದ ತೊಂದರೆ ಉಂಟಾಗಿಲ್ಲ-ಪೊಲೀಸ್ ಇಲಾಖೆ
ಪುತ್ತೂರು: ಅ.20ರಂದು ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸೇರಿದ್ದ ಜನರಿಗೆ ದೇಹ ನಿರ್ಜಲೀಕರಣಗೊಂಡ ಕಾರಣ ಕೆಲವು ಜನರು ಅಸ್ವಸ್ಥಗೊಂಡಿದ್ದು ಅವರನ್ನು ಅದೇ ಸ್ಥಳದಲ್ಲಿ ಚಿಕಿತ್ಸೆಗೆ ಒಳಪಡಿಸಿದ ನಂತರ ಗುಣಮುಖರಾಗಿ ಮನೆಗೆ ತೆರಳಿರುತ್ತಾರೆ.

ಆಸ್ಪತ್ರೆಯಲ್ಲಿ 13 ಜನ ಹೊರರೋಗಿಯಾಗಿ ಚಿಕಿತ್ಸೆಗೆ ಒಳಪಟ್ಟಿರುತ್ತಾರೆ. ಪ್ರಸ್ತುತ ಎಲ್ಲಾರೂ ಚೇತರಿಸಿಕೊಂಡಿದ್ದಾರೆ. ಯಾರಿಗೂ ಯಾವುದೇ ರೀತಿಯ ತೀವ್ರ ತರದ ತೊಂದರೆಗಳು ಉಂಟಾಗಿರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.



