ಕರಾವಳಿರಾಜ್ಯ

ಪುತ್ತೂರು|ಹೆಜ್ಜೇನು ದಾಳಿಯಿಂದ ಮೃತಪಟ್ಟ ಬಾಲಕಿಯ ಕುಟುಂಬಕ್ಕೆ  ಪರಿಹಾರ ಘೋಷಿಸಿದ -ಸಿಎಂ

ಪುತ್ತೂರು:ಕೆಲ ದಿನಗಳ ಹಿಂದೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದವೇಳೆ ಹೆಜ್ಜೇನು ದಾಳಿಗೆ ಬಲಿಯಾಗಿದ್ದ ಬಾಲಕಿಯ ಕುಟುಂಬಕ್ಕೆ ಸರಕಾರದಿಂದ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕೊಂಬೆಟ್ಟು ಮೈದಾನದಲ್ಲಿ ಅ.20ರಂದು ನಡೆದ 13ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮದಲ್ಲಿ,  ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿಯಂತೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ.ಪರಿಹಾರ ನೀಡಲು ಆದೇಶ ಮಾಡಿದ್ದೇನೆ. ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ಅವರು ಹೇಳಿದರು.

ಕೆಲ ದಿನಗಳ ಹಿಂದೆ ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ ಪಡೂರು ಗ್ರಾಮದ ಕೂಟೇಲು ಕಿರಣ್ ಎಂಬವರ ಪುತ್ರಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಇಶಾ ಅವರು ಮೃತಪಟ್ಟಿದ್ದರು.

Leave a Reply

Your email address will not be published. Required fields are marked *

error: Content is protected !!