ಅಶೋಕ ಜನಮನ ಕಾರ್ಯಕ್ರಮದಲ್ಲಿ ಜನಸಂದಣಿಯಿಂದ ಅಸ್ವಸ್ಥ:
ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಪರಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ ಅವರು, ಅವರ ಆರೋಗ್ಯ ವಿಚಾರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಧ್ಯಾಹ್ನದ ವೇಳೆ ಉಡುಗೋರೆ ವಿತರಣೆ ವೇಳೆ ಜನಸಂದಣಿಯಿಂದ ಕೆಲವರು ಅಸ್ವಸ್ಥರಾಗಿದ್ದರು. ಅಸ್ವಸ್ಥರಾದವನ್ನು ಕೂಡಲೇ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ವಸ್ಥರಾದವರು ಚಿಕಿತ್ಸೆ ಪಡೆದು ತೆರಳಿದ್ದಾರೆ. ಮಹಿಳೆಯರಿಬ್ಬರು ರಾತ್ರಿ ವೇಳೆ ಆಸ್ಪತ್ರೆಯಲ್ಲಿದ್ದು ಅವರನ್ನು ಶಾಸಕಅಶೋಕ್ ರೈ ಭೇಟಿ ಆರೋಗ್ಯ ವಿಚಾರಿಸಿದರು.ಬಳಿಕ ರಾತ್ರಿ ಚಿಕಿತ್ಸೆ ಪಡೆದು ತೆರಳಿದ್ದಾರೆ.



