ಕರಾವಳಿಕ್ರೈಂ

ಮೂರು ಪ್ಲಾಟ್ ಗಳಲ್ಲಿ  20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿ ಮತ್ತು  ಮೊಬೈಲ್ ಫೋನ್ ಕಳವು-ಆರೋಪಿಗಳಿಬ್ಬರ ಸೆರೆ

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಗ್ರಾಮ ಲಾಲ್ ಬಾಗ್  ಹ್ಯಾಟ್ ಹಿಲ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿರುವ 3 ಫ್ಲಾಟ್ ಗಳಿಗೆ ನುಗ್ಗಿದ ಕಳ್ಳರು ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು, ರೂ 5000/- ನಗದು ಹಣ,  3000 Dirham ಹಾಗೂ ಮೊಬೈಲ್ ಫೋನ್ ನ್ನು ಕಳ್ಳತನ ಮಾಡಿರುವ ಬಗ್ಗೆ ರಿಯಾಜ್ ರಶೀದ್ ಎಂಬವರು ನೀಡಿದ ದೂರಿನ ಮೇರೆಗೆ ಅ.20ರಂದು  ಉರ್ವಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಉರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿಯವರು ಹಾಗೂ ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡವು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಆರೋಪಿ ಪತ್ತೆ ಕಾರ್ಯವನ್ನು ನಡೆಸಿದ್ದು, ಪ್ರಕರಣ ದಾಖಲಾಗಿ ಸುಮಾರು 20 ಗಂಟೆಗಳ ಒಳಗಾಗಿ ಶೀಘ್ರ ಕಾರ್ಯ ಪ್ರವೃತ್ತರಾಗಿ, ಸದ್ರಿ ಮನೆಗಳ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನು ಅ.21ರ ಬೆಳಗಿನ ಜಾವ ಬೆಂಗಳೂರಿನಲ್ಲಿ ಬಂಧಿಸಿ ಆರೋಪಿತರಿಂದ ಪ್ರಕರಣದಲ್ಲಿ ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣಗಳನ್ನು, ರೂ 5000/- ನಗದು ಹಣ, ರೂ 70,000/- ಬೆಲೆಯ 3000 Dirham   ಹಾಗೂ ಮೊಬೈಲ್ ಫೋನನ್ನು  ವಶಕ್ಕೆ  ಪಡೆಯಲಾಗಿದೆ.

ಅಭಿಜಿತ್ ದಾಸ್(24)  ತಂದೆ ರವೀಂದೋ ದಾಸ್  ವಾಸ :- ಪಾಂಚಗೋರಿ, ಮೇಡಿನೋವಾ ರಸ್ತೆ, ಅಂಬಿಕಾ ಪುರ್ ಪಾರ್ಟ್ 10, ಮೆಹೆರ್ ಪುರ್ ಅಂಚೆ  ಕಾಚಾರ್ ಜಿಲ್ಲೆ ಅಸ್ಸಾಂ ರಾಜ್ಯ ಹಾಗೂ ದೇಬಾ ದಾಸ್(21)ತಂದೆ -ದಿಲಿಪ್ ಕುಮಾರ್ ದಾಸ್, ವಾಸ :-ಶ್ರೀ ದುರ್ಗಾ ಮಂದಿರ, ಹತ್ತಿರ ಮೆಹೆರ್ ಪುರ್ ಗ್ರಾಮ, ಕಾಚಾರ್ ಜಿಲ್ಲೆ, ಅಸ್ಸಾಂ ರಾಜ್ಯ. ಎಂಬವರು ಬಂಧಿತ ಆರೋಪಿಗಳು.

ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ ಈ ಮೊದಲು ಬೆಂಗಳೂರು ನಗರ ಮತ್ತು ಅಸ್ಸಾಂ ಸೇರಿದಂತೆ ಹಲವು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತವೆ. ಮೇಲಾಧಿಕಾರಿಗಳ ನಿರ್ದೇಶನದಂತೆ, ಉರ್ವಾ ಪೊಲೀಸರ ತಂಡವು ಬೆಂಗಳೂರಿನಲ್ಲಿ ಆರೋಪಿಗಳನ್ನು  ಅ. 21ರಂದು ಬೆಳಗ್ಗಿನ ಜಾವ ಬೆಂಗಳೂರು ನಗರ ಪೊಲೀಸ್ ರವರ ಸಹಕಾರದಿಂದ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಮುಂದಿನ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುವುದು ಮತ್ತು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು. 

ಈ ಕಾರ್ಯಾಚರಣೆಯನ್ನು ಡಿಸಿಪಿ ಕ್ರೈಂ ರವರ ಮೇಲ್ವಿಚಾರಣೆಯಲ್ಲಿ ಕೇಂದ್ರ ಉಪ ವಿಭಾಗದ ಎಸಿಪಿ, ಪಿ.ಐ, ಉರ್ವ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!