ಕರಾವಳಿಕ್ರೈಂ

ಪುತ್ತೂರು|ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಎಂಬಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಅಬ್ದುಲ್ಲಾ (40ವ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು  ಸಾಗಿಸುತ್ತಿದ್ದನು. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು  ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ.

ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ  ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು.
ಆರೋಪಿಯನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ.


ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!