ಎರಡನೇ ಪಂದ್ಯದಲ್ಲೂ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಏಕದಿನ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲೂ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸೊನ್ನೆ ಸುತ್ತಿದ್ದಾರೆ.

ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ನಾಯಕ ಮಿಚೇಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ಗೆ ಇಳಿದ ಭಾರತಕ್ಕೆ ಮೊದಲ ಹಂತದಲ್ಲೇ ಹಿನ್ನಡೆ ಎದುರಾಯಿತು.
ರೋಹಿತ್ ಶರ್ಮಾ ಜೊತೆಗೆ ಇನಿಂಗ್ಸ್ ಆರಂಭಿಸಿದ ಶುಭಮನ್ ಗಿಲ್ ಕೇವಲ 9 ಎಸೆತಗಳಲ್ಲಿ 8 ರನ್ ಗಳಿಸಿ ಔಟಾದರು. ನಂತರ ಕ್ರೀಸ್ಗೆ ಬಂದ ವಿರಾಟ್ ಕೊಹ್ಲಿ ಮೊದಲ ಪಂದ್ಯದಂತೆ ಈ ಪಂದ್ಯದಲ್ಲೂ ಶೂನ್ಯಕ್ಕೆ ಔಟಾಗಿ ಪೆವಿಲಿಯನ್ ಸೇರಿದರು. ಆಸ್ಟ್ರೇಲಿಯಾದ ಯುವ ವೇಗಿ ಷೇವಿಯರ್ ಬರ್ಟ್ರೆಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಕೊಹ್ಲಿ ಔಟಾದರು.



