ಬೆಳ್ತಂಗಡಿ: ಶಿಕ್ಷಕಿಯ ಮೃತದೇಹ ಬಾವಿಯಲ್ಲಿ ಪತ್ತೆ
ಬೆಳ್ತಂಗಡಿ: ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯ ಶಿಕ್ಷಕಿಯ ಮೃತದೇಹ ಗುರುವಾರ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.

ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ ತೇಜಸ್ವಿನಿ (23) ಮೃತಪಟ್ಟವರು. ಇವರು ಎರಡು ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದ್ದು ಕಾಲು ಜಾರಿ ಬಾವಿಗೆ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುವುದು ಖಚಿತವಾಗಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.





