ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ-ಯತೀಂದ್ರ
ಮೈಸೂರು: ಸಿದ್ದರಾಮಯ್ಯ ನಂತರ ಸಚಿವ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂಬ ಅರ್ಥದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡ ಯತೀಂದ್ರ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದಿದ್ದಾರೆ.
ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, ‘ನವೆಂಬರ್ ಕ್ರಾಂತಿ’ ಕೇವಲ ಊಹಾಪೋಹ. ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆ ಇಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ನಿಮ್ಮ ತಂದೆ ಐದು ವರ್ಷ ಪೂರ್ಣಗೊಳಿಸುತ್ತಾರೆಯೇ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಪುತ್ರ, “ಪ್ರಸ್ತುತ ಪರಿಸ್ಥಿತಿಯಲ್ಲಿ, ಅವರು ಐದು ವರ್ಷಗಳ ಅವಧಿ ಪೂರ್ಣಗೊಳಿಸುತ್ತಾರೆ” ಎಂದು ಹೇಳಿದರು.



