ಕರಾವಳಿ

ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಪೊಲೀಸ್‌ ಇಲಾಖೆ

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ.27ರಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿದೆ.


ಮಹೇಶ್‌ ಶೆಟ್ಟಿ ತಿಮರೋಡಿ ಪರವಾಗಿ ಪ್ರತಿಭಟನೆ ನಡೆಸಲು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್‌ ಕುಮಾ‌ರ್ ಅಂತರ ಅನುಮತಿ ಕೋರಿದ್ದು ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ಅನುಮತಿ ನಿರಾಕರಿಸಲಾಗಿದೆ. ಈ ಸೂಚನೆಯನ್ನು ಉಲ್ಲಂಘಿಸಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!