ಪುತ್ತೂರು: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ 118/2025 ಕ್ಕೆ ಸಂಬಂಧಿಸಿದಂತೆ ಅ. 30ರಂದು ಕಲಂ 35 (3 )ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಪ್ರಭಾಕರ ಭಟ್ ಕಲ್ಲಡ್ಕ ಅವರ ಮನೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.