ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಹೇಳಿದ್ದೇನು?
ಬೆಂಗಳೂರು: ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ” ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.



