ಮಧುರಾ ಇಂಟರ್ನ್ಯಾಷನಲ್ ಸ್ಕೂಲ್‌ಗೆ ಖ್ಯಾತ ತರಬೇತುದಾರ ರಫೀಕ್ ಮಾಸ್ಟರ್ ಭೇಟಿ
ಪುತ್ತೂರು: ಮೇನಾಲ ಮಧುರಾ ಇಂಟರ್ನ್ಯಾಷನಲ್ ಸ್ಕೂಲ್‌ನ ಸೀನಿಯರ್ ಅಕಾಡೆಮಿಕ್ ಡೈರೆಕ್ಟರ್ ಹಾಗೂ ಖ್ಯಾತ ತರಬೇತುದಾರ ರಫೀಕ್ ಮಾಸ್ಟರ್ ಅವರು ಅ.25ರಂದು ಶಾಲೆಗೆ ಭೇಟಿ ನೀಡಿ ಎಲ್ಲಾ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಟೀನ್‌ಏಜ್ ಹುಡುಗರಿಗಾಗಿ ವಿಶೇಷ ತರಗತಿ ನಡೆಸಿದ ಅವರು, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳುವ ಮೂಲಕ ಭವಿಷ್ಯದ ಸವಾಲುಗಳನ್ನು ಎದುರಿಸಲು ಕೆಲವು ಪ್ರೇರಣಾದಾಯಕ ಸೂತ್ರಗಳನ್ನು ಹಂಚಿಕೊಂಡರು.
ಅದೇ ದಿನ LKG ಮತ್ತು UKG ಮಕ್ಕಳು ಆಯೋಜಿಸಿದ್ದ ಫ್ರೂಟ್ ಡೇ ಕಾರ್ಯಕ್ರಮದಲ್ಲೂ ಭಾಗವಹಿಸಿದ ಅವರು, ಮಕ್ಕಳ ಪೋಷಕರು ಹಾಗೂ ಶಿಕ್ಷಕಿಯರ ಉತ್ಸಾಹ ಮತ್ತು ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಶ್ಲಾಘಿಸಿದರು.
ದಿನದ ಕೊನೆಯಲ್ಲಿ ಶಿಕ್ಷಕಿಯರೊಂದಿಗೆ ಸಂವಾದ ನಡೆಸಿ ಅಮೂಲ್ಯವಾದ ಸಲಹೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಹನೀಫ್ ಮಧುರಾ, ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ರಾವ್ ಹಾಗೂ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.





