ಪುತ್ತೂರು ಹಾಗೂ ವಿಟ್ಲ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 6 ಕೋಟಿ ಅನುದಾನ: ಸಮಾಜ ಕಲ್ಯಾಣ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು: ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 6 ಕೋಟಿ ರೂ ಅನುದಾನ ನೀಡುವಂತೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ರಸ್ತೆ ಅಭಿವೃದ್ದಿಗೆ 5 ಕೋಟಿ ರೂ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು.

ಗುರುವಾರ ಸಚಿವರನ್ನು ಭೇಟಿಯಾದ ಶಾಸಕರು ವಿಟ್ಲ ಹಾಗೂ ಪುತ್ತೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯ ಅಗತ್ಯದ ಬೇಡಿಕೆಯಾಗಿದೆ. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು ಇನ್ನೂ ಅದು ಈಡೇರಿಲ್ಲ. ವಿಟ್ಲ ಹಾಗೂ ಪುತ್ತೂರು ಭಾಗದಲ್ಲಿ ಅಂಬೇಡ್ಕರ್ ನಿರ್ಮಾಣ ಮಾಡುವ ಮೂಲಕ ದಲಿತ ಸಮುದಾಯದ ಬೇಡಿಕೆಗೆ ಮಣ್ಣನೆ ನೀಡಬೇಕಿದೆ. ಈ ಉದ್ದೇಶದಿಂದ ಸರಕಾರ ಎರಡೂ ಕಡೆಗಳಲ್ಲಿ ಭವನ ನಿರ್ಮಾಣಕ್ಕೆ ಪ್ರತ್ಯೇಕ ಅನುದಾನವನ್ನು ಒದಗಿಸುವಂತೆ ಶಾಸಕರು ಸಚಿವರಿಗೆ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿದಸಚಿವರು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಇಲಾಖೆಯಿಂದ ಅನುದಾನ ಒದಗಿಸುವ ಭರವಸೆಯನ್ನು ನೀಡಿದ್ದಾರೆ.
ರಸ್ತೆ ಅಭಿವೃದ್ದಿಗೂ ಅನುದಾನ ಕೊಡಿ:
ಸಮಾಜ ಕಲ್ಯಾಣ ಇಲಾಖೆಯಿಂದ ರಸ್ತೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆಯೂ ಶಾಸಕರು ಸಚಿವರಿಗೆ ಮನವಿ ಸಲ್ಲಿಸಿದರು. ಇಲಾಖೆಯ ಅನುದಾನದಿಂದ ಕಾಲನಿಗಳ ರಸ್ತೆಯನ್ನು ಅಭಿವೃದ್ದಿ ಮಾಡಲು ಸಹಕಾರ ನೀಡಲು ಕನಿಷ್ಟ 5 ಕೋಟಿ ಅನುದಾನ ಒದಗಿಸುವಂತೆಯೂ ಶಾಸಕರುಮನವಿ ಸಲ್ಲಿಸಿದರು.



