ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್.ವೈ.ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.



