ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ತಲೆಗಿಟ್ಟ ಸಹಸವಾರ!!
ದ್ವಿಚಕ್ರ ವಾಹನದಲ್ಲಿ ಹಿಂಬದಿ ಕುಳಿತಿರುವ ವ್ಯಕ್ತಿಯೊಬ್ಬ ತಲೆಯ ಮೇಲೆ ಬಾಣಲೆ ಹಿಡಿದುಕೊಂಡು ಕುಳಿತುಕೊಂಡಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಇದು ಬೇಜವಾಬ್ದಾರಿತನದ ಪರಮಾವಧಿ ಎಂದು ಟೀಕಿಸಿದ್ದಾರೆ.

ಬೈಕ್‌ನ ಹಿಂಬದಿ ಸವಾರನು ತನ್ನ ತಲೆಯ ಮೇಲೆ ಬಾಣಲೆಯನ್ನು ಹಿಡಿದುಕೊಂಡು ಕುಳಿತಿರುವುದನ್ನು ಕಾಣಬಹುದು. ಈ ದೃಶ್ಯವನ್ನು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಬಗ್ಗೆ ಬಳಕೆದಾರರು ವಿವಿಧ ರೀತಿಯ ಕಮೆಂಟ್ ಗಳನ್ನು ಹಾಕುತ್ತಿದ್ದಾರೆ. ಇದು ಬೆಂಗಳೂರಿನಲ್ಲಿ ಕಂಡು ಬಂದ ದೃಶ್ಯ ಎಂದು ಹೇಳಲಾಗುತ್ತಿದೆ.



