ಕರಾವಳಿಕ್ರೈಂ

ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜಾಹೀರಾತು ನೀಡಿ ವಂಚನೆ, ಆರೋಪಿಯ ಬಂಧನ

ಮಂಗಳೂರು: ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜಾಹೀರಾತು ನೀಡಿ ವಂಚಿಸಿದ ಪ್ರಕರಣದ ಆರೋಪಿಯನ್ನು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಸಾರ್ವಜನಿಕರ ವೈಯಕ್ತಿಕ ಸಮಸ್ಯೆ ಗಳನ್ನು ತಕ್ಷಣ ಪೂಜೆ ಮಾಡಿ ಪರಿಹರಿಸುವುದಾಗಿ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜಾಹೀರಾತು ನೀಡಿ ವಂಚಿಸಿದ ಆರೋಪಿ ಬೆಂಗಳೂರು ಯಶವಂತಪುರದ ನಿವಾಸಿ ವಾಸುದೇವ ಆರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ. ವಂಚನೆ ನಡೆಸಿದ ಘಟನೆಗೆ ಸಂಬಂಧಿಸಿ ದ.ಕ. ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್ ಗಳು ಹಾಗೂ 20,300 ರೂ. ಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!