ವಿಶ್ವ ಕಪ್ ವಿಜೇತ ಭಾರತೀಯ ಮಹಿಳಾ ಕ್ರಿಕೆಟ್ ತಂಡದಿಂದ ಪ್ರಧಾನಿ ಮೋದಿ ಭೇಟಿ
ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಮತ್ತು ಮುಖ್ಯ ತರಬೇತುದಾರ ಅಮೋಲ್ ಮುಜುಂದಾರ್ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತೋರಿದ ಅದ್ಬುತ ಪ್ರದರ್ಶನಕ್ಕೆ ಹರ್ಮನ್ಪ್ರೀತ್ ಕೌರ್ ನೇತೃತ್ವದ ತಂಡವನ್ನು ಅಭಿನಂದಿಸಿ ಅವರೊಂದಿಗೆ ಸಂವಾದ ನಡೆಸಿದರು.

ಸತತ ಮೂರು ಸೋಲುಗಳನ್ನು ಅನುಭವಿಸಿದ ನಂತರ ಭಾರತ ಮಹಿಳಾ ತಂಡದ ತೋರಿದ ಅದ್ಭುತ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. 2017ರ ವಿಶ್ವಕಪ್ ಬಳಿಕ ಪ್ರಧಾನಿ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡ ನಾಯಕಿ ಹರ್ಮನ್ ಪ್ರೀತ್ ಕೌರ್, ಅಂದು ಟ್ರೋಪಿ ಇಲ್ಲದೆ ಬಂದಿದ್ದೆವು. ಆದರೆ ಈಗ ಟ್ರೋಫಿ ಗೆದ್ದು ಪ್ರಧಾನಿ ಭೇಟಿಯಾಗಿದ್ದೇವೆ. ಹೀಗೆ ಭೇಟಿಯಾಗಲು ಬಯಸಿದ್ದೆವು ಎಂದು ತಿಳಿಸಿದ್ದಾರೆ. ಪ್ರಧಾನಿ ಅವರ ಮಾತುಗಳು ಸದಾ ಸ್ಪೂರ್ತಿದಾಯಕವಾಗಿವೆ. ಉಪ ನಾಯಕಿ ಸ್ಮೃತಿ ಮಂಧಾನ ಹೇಳಿದ್ದಾರೆ.



