ಕರಾವಳಿಕ್ರೈಂ

ನೈತಿಕ ಪೊಲೀಸ್ ಗಿರಿ-ಇಬ್ಬರ ಬಂಧನ

ಪುತ್ತೂರು: ಸಹಪಾಠಿ  ವಿದ್ಯಾರ್ಥಿಯೊಬ್ಬ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ ಸಹಪಾಠಿ ವಿಧ್ಯಾರ್ಥಿ/ವಿದ್ಯಾರ್ಥಿನಿಯರೊಂದಿಗೆ ಆತನ ಮನೆಗೆ ಹೋಗಲು ನ.6ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ದ್ವಿಚಕ್ರ ವಾಹನದಲ್ಲಿ ಇಬ್ಬರು ವಿಧ್ಯಾರ್ಥಿ/ವಿಧ್ಯಾರ್ಥಿನಿಯರನ್ನು ತಡೆದು ನಿಲ್ಲಿಸಿದ್ದಾರೆ. ಆ ಬಳಿಕ ಆರೋಪಿಗಳಾದ ಮುಸ್ತಾಫ ಮತ್ತು ಸಹಸವಾರ ಮುಸ್ತಾಫ ಪೆರಿಯಡ್ಕ ಎಂಬವರು ವಿದ್ಯಾರ್ಥಿಗಳ ಹೆಸರು, ಕಾಲೇಜು ಹಾಗೂ ಊರಿನ ಬಗ್ಗೆ ವಿಚಾರಿಸಿ, ವಿಭಿನ್ನ ಕೋಮುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು  ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 107/2025, ಕಲಂ: 126(2), 352, 351(2), 115(2), 353(2) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತರನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!