ಪುತ್ತೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತನೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನ.ರಂದು ಸಂಜೆ,ಪುತ್ತೂರು ನಗರ ಠಾಣೆಯ ಎಸ್ ಐ ಆಂಜನೇಯ ರೆಡ್ಡಿ ಅವರು ಸಿಬ್ಬಂದಿಗಳೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಪುತ್ತೂರು ತಾಲೂಕು ಕಬಕ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ನಾಲ್ವರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಸ್ಥಳಕ್ಕೆ ಹೋಗಿ ಸಾರ್ವಜನಿಕ ಸ್ಥಳದಲ್ಲಿದ್ದ ನಾಲ್ವರು ವ್ಯಕ್ತಿಗಳನ್ನು ತಡೆದು ವಿಚಾರಿಸಿದಾಗ ಅವರು ಯಾವುದೋ ಮಾದಕ ವಸ್ತುವನ್ನು ಸೇವಿಸಿದವನಂತೆ ಕಂಡುಬಂದಿತ್ತು.
ಅವರನ್ನು ವಿಚಾರಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿದ ಬಗ್ಗೆ ಒಪ್ಪಿಕೊಂಡಿರುತ್ತಾರೆ. ಅವರನ್ನು ನ. 5ರಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನಿಷೇದಿತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ನಾಲ್ವರು ಆರೋಪಿಗಳಾದ ನೆಕ್ಕಿಲಾಡಿ ಗ್ರಾಮದ ಮುಬಾರಕ್(21) ಹಾಗೂ ಅಬ್ದುಲ್ ಅನಾಸ್(21), ಬಿಳಿಯೂರು ಗ್ರಾಮದ ಹಿತೇಶ್ (21), ಕಬಕ ಗ್ರಾಮದ ಉಮ್ಮರ್ ಫಾರೂಕ್(41) ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 105/2025 ಕಲಂ-27(b) NDPS Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




