ಕರಾವಳಿ

ಪಾಪೆಮಜಲು ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ರಾಜ್ಯ ಪ್ರಾಚ್ಯ ವಸ್ತು ಇಲಾಖೆ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಚಿರಾಗ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಮಾಣಿಯಡ್ಕ ನಿವಾಸಿ ಚಂದ್ರಕುಮಾರ್ ಮತ್ತು ಮಂಜುಳಾ ದಂಪತಿಗಳ ಪುತ್ರ.


ರಾಜ್ಯ ಪ್ರಾಚ್ಯವಸ್ತು ಇಲಾಖೆ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ  9ನೇ ತರಗತಿಯ ವಿದ್ಯಾರ್ಥಿನಿ ವರ್ಷಿಣಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಕೌಡಿಚ್ಚಾರು ನಿವಾಸಿ ಮೋಹನ ಹಾಗೂ ಅನಿತಾ ದಂಪತಿಗಳ ಪುತ್ರಿ.

Leave a Reply

Your email address will not be published. Required fields are marked *

error: Content is protected !!