ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಪುತ್ತೂರು: ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನ.8ರಂದು ಮಧ್ಯಾಹ್ನ, ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋ ರಿಕ್ಷಾದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಜನಾರ್ಧನ ಕೆ.ಎಂ ರವರು ಸಿಬ್ಬಂದಿಗಳೊಂದಿಗೆ ತೆರಳಿ ಸದ್ರಿ ಆಟೋ ರಿಕ್ಷಾವನ್ನು ತಡೆದು ಪರಿಶೀಲಿಸಿದಾಗ, ಸುಮಾರು 1 ಕೆಜಿ ಗಿಂತಲೂ ಮೇಲ್ಪಟ್ಟ ನಿಷೇದಿತ ಮಾದಕ ವಸ್ತು ಗಾಂಜಾ ಹಾಗೂ ಮಾರಕಾಯುಧವಾದ ಸುಮಾರು ಅಂದಾಜು 25 ಇಂಚು ಉದ್ದದ ತಲವಾರು ಪತ್ತೆಯಾಗಿದೆ.
ಸದ್ರಿ ಚಾಲಕನ ಬಗ್ಗೆ ವಿಚಾರಿಸಿದಾಗ ಆತ ಕಡಬ ತಾಲೂಕು ಸವಣೂರು ನಿವಾಸಿ ಪ್ರಸಾದ್ ಇ (35) ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 106/2025, ಕಲಂ-: 8(C), 20(ii)(c) NDPS & ಕಲಂ 25(1B),b) Indian Arms Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



