ರಾಷ್ಟ್ರೀಯ

ಕೆಂಪು ಕೋಟೆ ಬಳಿ ಸ್ಫೋಟ ಪ್ರಕರಣ: ಮೃತರ ಕುಟುಂಬಸ್ಥರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ಮೊತ್ತ ಘೋಷಿಸಿದ ದೆಹಲಿ ಸಿಎಂ

ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ರೂ. 10 ಲಕ್ಷ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಿಸಿದ್ದಾರೆ.


ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ ರೂ. 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.


ದೆಹಲಿಯಲ್ಲಿ ನಡೆದ ದುರದೃಷ್ಟಕರ ಘಟನೆಯು ಇಡೀ ನಗರವನ್ನು ಆಘಾತವನ್ನುಂಟು ಮಾಡಿದೆ. ಈ ಸಂಕಷ್ಟದ ಸಮಯದಲ್ಲಿ ದೆಹಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತೀವ್ರವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!