ಕರಾವಳಿಕ್ರೈಂ

ಉಪ್ಪಿನಂಗಡಿ: ವಿಷ ಸೇವಿಸಿ  ಆತ್ಮಹತ್ಯೆಗೆ ಶರಣಾದ ಬಾಲಕಿ


ಉಪ್ಪಿನಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಮೃತ ಬಾಲಕಿ.



ಈಕೆ ಉಪ್ಪಿನಂಗಡಿಯ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ನ.4ರಂದು ಹರ್ಷಿತಾ ಮನೆಯಲ್ಲಿ ತಂದಿಟ್ಟಿದ್ದ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಳು. ವಿಷಯ ತಿಳಿದ ತಾಯಿ ಚಿಕಿತ್ಸೆಗೆಂದು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಹರ್ಷಿತಾಳಿಗೆ ಕಡಬದ ರಾಜೇಶ್ ಎಂಬಾತ ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ಇದೆ ಎಂದು ತಂದೆ  ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!